ಪುತ್ತೂರು: ಬ್ಲಾಕ್ ಕಾಂಗ್ರೆಸ್ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ಅಕ್ಟೋಬರ್ ತಿಂಗಳಲ್ಲಿ ಪ್ರತಿ ಗ್ರಾಮದಲ್ಲಿ ಗಾಂಧಿ ಗ್ರಾಮ ಸ್ವರಾಜ್ಯ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಅ.6 ರಂದು ಕುಂಬ್ರದಲ್ಲಿ ಉದ್ಘಾಟನೆಗೊಂಡ ಈ ಕಾರ್ಯಕ್ರಮ ಪ್ರತಿದಿನ ಒಂದೊಂದು ವಲಯದಲ್ಲಿ ನಡೆಯುತ್ತಿದ್ದು, ವಿಪರೀತ ಮಳೆಯ ಕಾರಣ ಅ. 12,13ನೇ ದಿನದ ಕಾರ್ಯಕ್ರಮ ಮುಂದೂಡಲಾಗಿದ್ದು, ಮುಂದೂಡಿದ ಈ ಕಾರ್ಯಕ್ರಮವನ್ನು ಮುಂದಿನ ದಿನದಲ್ಲಿ ನಡೆಸುವ ಬಗ್ಗೆ ಹಾಗೂ ಈ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಅತ್ಯಂತ ಪರಿಣಾಮಕಾರಿ ರೀತಿಯಲ್ಲಿ ನಡೆಸುವ ಬಗ್ಗೆ ಸಮಾಲೋಚನಾ ಸಭೆಯು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.
ಬ್ಲಾಕ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ ಯವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಮಾಜಿ ಶಾಸಕಿ ಶಕುಂತಲಾ ಟಿ ಶೆಟ್ಟಿ ಸಮಾರೋಪ ಸಮಾರಂಭವನ್ನು ಅತ್ಯಂತ ವ್ಯವಸ್ಥಿತ ರೀತಿಯಲ್ಲಿ ನಡೆಸುವ ಬಗ್ಗೆ ಸಲಹೆ ಸೂಚನೆ ನೀಡಿದರು.
ಸಭೆಯಲ್ಲಿ ವಿಟ್ಲ -ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜರಾಮ, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಅಮಲ ರಾಮಚಂದ್ರ,ಕಾರ್ಯದರ್ಶಿ ಮನಮೋಹನ್ ರೈಅಬೀಬು ಕಣ್ಣೂರು ಕಚೇರಿ ಕಾರ್ಯದರ್ಶಿ ಸಿರಿಲ್ ರೋಡ್ರಿಗಸ್,ಬ್ಲಾಕ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ವಿ ಎಚ್ ಎ ಶಕೂರ್ ಹಾಜಿ, ಎಸ್ ಸಿ ಘಟಕದ ಅಧ್ಯಕ್ಷ ಕೇಶವ ಪಡೀಲ್, ಎಸ್ ಟಿ ಘಟಕದ ಅಧ್ಯಕ್ಷ ಮಹಾಲಿಂಗ ನಾಯ್ಕ್, ಮಹಿಳಾ ಘಟಕದ ಅಧ್ಯಕ್ಷೆ ಶಾರದಾ ಅರಸ್, ಆರ್ಯಾಪು ವಲಯ ಅಧ್ಯಕ್ಷ ಪ್ರಜ್ವಲ್ ರೈ, ಕೆದಂಬಾಡಿ ವಲಯ ಅಧ್ಯಕ್ಷ ಪುರಂದರ ರೈ ಕೋರಿಕ್ಕಾರ್,ನಗರ ಸಭಾ ಸದಸ್ಯ ರಿಯಾಜ್ ಪರ್ಲಡ್ಕ,ಇಂಟಕ್ ಅಧ್ಯಕ್ಷ ಜಯಪ್ರಕಾಶ್ ಬದಿನಾರ್, ಉದ್ಯಮಿ ಶಿವರಾಮ ಆಳ್ವ ಮೊದಲಾದವರು ಉಪಸ್ಥಿತರಿದ್ದರು.