ಮಂಗಳೂರು: ಕರಾವಳಿಯಲ್ಲಿ ಗೋಹತ್ಯೆ, ಮತಾಂತರ ವಿಚಾರವಾಗಿ ಉಡುಪಿಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. ಗೋಹತ್ಯಾ ನಿಷೇಧ ಕಾಯ್ದೆ ಈಗಾಗಲೇ ಜಾರಿಯಲ್ಲಿದೆ. ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಲು ಬಹಳಷ್ಟು ಚಿಂತನೆ ಮಾಡಿದ್ದೇವೆ ಎಂದರು.
ಇಂದು ಕರಾವಳಿಗೆ ಭೇಟಿ ನೀಡಿದ ವೇಳೆ ಮಾಧ್ಯಮಗಳ ಜೊತೆ ಮಾತನಾಡುವಾಗ ಗೋಹತ್ಯೆ, ಮತಾಂತರ ವಿಚಾರವಾಗಿ ಪ್ರತಿಕ್ರಿಯಿಸಿದರು. ಇತರ ರಾಜ್ಯಗಳ ಕಾನೂನು ಅಭ್ಯಾಸ ಮಾಡುತ್ತಿದ್ದೇವೆ. ಆದಷ್ಟು ಶೀಘ್ರ ಕಾನೂನು ತರಲು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.