ಪುತ್ತೂರು: ಬ್ಲಾಕ್ ಕಾಂಗ್ರೆಸ್ ಸಂಘಟಿಸಿರುವ ಗಾಂಧಿ ಗ್ರಾಮ ಸ್ವರಾಜ್ ಕಾರ್ಯಕ್ರಮವು ದಿನಾಂಕ ಅ.21 ರಂದು ಗುರುವಾರ ಪುರುಷರಕಟ್ಟೆಯಲ್ಲಿ ನಡೆಯಲಿದ್ದು, ಇದರ ಯಶಸ್ವಿಗಾಗಿ ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಪುರುಷರಕಟ್ಟೆ ಇವರ ಅಧ್ಯಕ್ಷತೆಯಲ್ಲಿ ಪೂರ್ವ ಭಾವಿ ಸಭೆ ನಡೆಯಿತು.
ಸಭೆಯಲ್ಲಿ ವಲಯ ಪ್ರದಾನ ಕಾರ್ಯದರ್ಶಿ ಅಝೀಜ್ ಮನಿಯ, ಕಾಂಗ್ರೆಸ್ ಕಾರ್ಮಿಕ ಘಟಕದ ಜಿಲ್ಲಾ ಉಪಾಧ್ಯಕ್ಷ ರವೀಂದ್ರ ರೈ ನೆಕ್ಕಿಲ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ವೇದನಾಥ ಸುವರ್ಣ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸಚಿನ್ ಸರೋಳಿ, ಕಾಂಗ್ರೆಸ್ ಸ್ಥಳೀಯ ಮುಖಂಡ ಮಂಜುನಾಥ್ ಶೇಖ್ ಹಾಗೂ ವಲಯ ಕಾಂಗ್ರೆಸ್ ನ ಪದಾಧಿಕಾರಿಗಳು ಉಪಸ್ಥಿತರಿದ್ದರು.