ಮಂಗಳೂರು: ಕಚೇರಿಯ ಸಿಬ್ಬಂದಿ ಓರ್ವರಿಗೆ ಲೈಂಗಿಕ ಕಿರುಕುಳ ನೀಡಿ ಜೀವ ಬೆದರಿಕೆಯೊಡ್ಡಿದ ಆರೋಪದ ಮೇಲೆ ದೂರು ದಾಖಲಾದ ಹಿನ್ನೆಲೆ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಮಹಮ್ಮದ್ ಫಾರೂಕ್ (47) ನನ್ನು ಅ.13 ರಂದು ಪೊಲೀಸರು ಬಂಧಿಸಿದ್ದಾರೆ.
ಕಚೇರಿಯ ಸಿಬ್ಬಂದಿಯೋರ್ವರಿಗೆ ಲೈಂಗಿಕ ಕಿರುಕುಳ ನೀಡಿ ಜೀವ ಬೆದರಿಕೆಯೊಡ್ಡಿದ್ದ ಎಂದು ಫಾರೂಕ್ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾದ ದೂರಿನ ಆಧಾರದಲ್ಲಿ ಮಹಮ್ಮದ್ ಫಾರೂಕ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.