ಪುತ್ತೂರು: ಅನಾರೋಗ್ಯದಿಂದಾಗಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಹಲವು ದಿನಗಳಿಂದ ಚಿಕಿತ್ಸೆ ಪಡೆದು ಈಗ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಕಾಂಗ್ರೆಸ್ ಮುಖಂಡ ಯೂನಸ್ ಖಾನ್ ರನ್ನು ಮಾಜಿ ಶಾಸಕಿ ಶಕುಂತಲಾ ಟಿ ಶೆಟ್ಟಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಈ ಹಿಂದೆ ಮಂಗಳೂರು ಆಸ್ಪತ್ರೆಯಲ್ಲಿರುವಾಗಲೂ ಶಕುಂತಲಾ ಟಿ ಶೆಟ್ಟಿ, ಬ್ಲಾಕ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ, ನಗರ ಕಾಂಗ್ರೆಸ್ ಅಧ್ಯಕ್ಷ ಎಚ್ ಮಹಮ್ಮದ್ ಆಲಿ ಆಸ್ಪತ್ರೆಗೆ ಭೇಟಿ ನೀಡಿ ಯೂನಸ್ ಖಾನ್ ರವರ ಆರೋಗ್ಯ ವಿಚಾರಿಸಿದ್ದರು.



























