ಬೆಳ್ತಂಗಡಿ: ಬೈಕ್ ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ ಸಂಭವಿಸಿ ಪುಂಜಾಲಕಟ್ಟೆಯ ಪೊಲೀಸ್ ಸಿಬ್ಬಂದಿ ಮೃತಪಟ್ಟ ಘಟನೆ ಪುಂಜಾಲಕಟ್ಟೆಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಮೃತಪಟ್ಟವರನ್ನು ಪುಂಜಾಲಕಟ್ಟೆಯ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಅಬೂಬಕ್ಕರ್ ಎನ್ನಲಾಗಿದೆ.
ಅಬೂಬಕ್ಕರ್ ರವರು ಕರ್ತವ್ಯ ಮುಗಿಸಿ ಬೈಕಿನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಎದುರುಗಡೆಯಿಂದ ಆಗಮಿಸಿದ ಜುಪಿಟರ್ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ದಾರಿ ಮಧ್ಯೆಯೇ ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.