ಪುತ್ತೂರು : ಪುತ್ತೂರಿನ ಪ್ರತಿಷ್ಡಿತ ಸರ್ಕಾರಿ ಮತ್ತು ಸರ್ಕಾರಿ ಸ್ವಾಮ್ಯದ ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ, ಆನ್‌ಲೈನ್ ಅರ್ಜಿ ಸಲ್ಲಿಕೆ ಹಾಗೂ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತ ಅಕಾಡಮಿ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವ ತಯಾರಿ ಬಗ್ಗೆ ಉಚಿತ ಮಾಹಿತಿ ಕಾರ್ಯಾಗಾರವು ಜ. 17ರಂದು ನಡೆಯಲಿದೆ.
ಕ್ಯಾಪ್ಟನ್ ಬ್ರಿಜೇಶ್ ಚೌಟ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಖ್ಯಾತ ತರಬೇತುದಾರರಾದ ಅರವಿಂದ ಚೊಕ್ಕಾಡಿ ಅವರ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ ಕಾರ್ಯಾಗಾರವು ಬೆಳಿಗ್ಗೆ 10ಕ್ಕೆ ಸರಿಯಾಗಿ ಆರಂಭವಾಗಲಿದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳು, ಸಂಸ್ಥೆಗಳು ಮತ್ತು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಬ್ಯಾಂಕ್ ಗಳಿಗೆ ಸಂಬಂಧಿಸಿದಂತೆ ನಡೆಯುವ ನೇಮಕಾತಿಯ ಪರೀಕ್ಷೆಗಳಿಗೆ ಯಾವ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳಬೇಕು, ಯಾವ ಇಲಾಖೆಯಲ್ಲಿ ಯಾವ ರೀತಿಯ ನೇಮಕಾತಿ ನಡೆಯುತ್ತದೆ ಮತ್ತು ಅರ್ಜಿ ಸಲ್ಲಿಸುವ ಬಗೆ ಹೇಗೆ ಎಂಬ ಸಂಪೂರ್ಣ ಮಾಹಿತಿಯನ್ನೊಳಗೊಂಡು ಪದವಿ ಪೂರ್ವ, ಪದವಿ, ಸ್ನಾತಕೋತ್ತರ ಪದವಿ, ಐಟಿಐ, ಡಿಪ್ಲೊಮಾ ಓದು ಮುಗಿಸಿರುವ ಹಾಗೂ ವಿದ್ಯಾಭ್ಯಾಸಗೈಯುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡುವ ಕಾರ್ಯ ಇದಾಗಿದ್ದು,ಪುತ್ತೂರಿನ ಎಪಿಎಂಸಿ ರಸ್ತೆಯ ಸಿಟಿ ಆಸ್ಪತ್ರೆ ಸಮೀಪದ ಹಿಂದೂಸ್ತಾನ್ ಕಾಂಪ್ಲೆಕ್ಸ್ ನ 1ನೇ ಮಹಡಿಯಲ್ಲಿರುವ ವಿದ್ಯಾಮಾತ ಅಕಾಡೆಮಿಯಲ್ಲಿ ಕಾರ್ಯಾಗಾರವು ನಡೆಯಲಿದೆ. ಕಾರ್ಯಾಗಾರದಲ್ಲಿ ಭಾಗವಹಿಸಲಿಚ್ಛಿಸುವ ವಿದ್ಯಾರ್ಥಿಗಳು 8590773486 ಅಥವಾ 9148935808 ಸಂಖ್ಯೆಗೆ ಕರೆ ಮಾಡಿ ಹೆಸರು ನೋಂದಾಯಿಸುವಂತೆ ಅಕಾಡೆಮಿ ಪ್ರಕಟಣೆ ತಿಳಿಸಿದೆ.