ಪುತ್ತೂರು: ಕೋಡಿಂಬಾಡಿ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಗಳ ಸಮಾಲೋಚನಾ ಸಭೆಯು ಅ.17 ರಂದು ದೇವಳದ ಚಿನ್ಮಯೀ ಸಭಾಂಗಣದಲ್ಲಿ ನಡೆಯಿತು.
ದೇವಳದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ರೈ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು.
ಸಭೆಯಲ್ಲಿ ಬ್ರಹ್ಮಕಲಶೋತ್ಸವ ಪ್ರಧಾನ ಸಮಿತಿಯ ಪದಾಧಿಕಾರಿಗಳು, ಉಪ ಸಮಿತಿಯ ಸಂಚಾಲಕರು ಹಾಗೂ ಸಹಸಂಚಾಲಕರೊಂದಿಗೆ ದಶಂಬರ್ ತಿಂಗಳಿನಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವದ ಸಿದ್ಧತೆಗಳ ಕುರಿತು ಚರ್ಚಿಸಲಾಯಿತು.