ಉಡುಪಿ: ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದಿಂದ ಅಂಬಲಪಾಡಿ ಮಹಾಕಾಳಿ ಅಮ್ಮನವರ ಸನ್ನಿಧಾನದವರೆಗೆ ನಡೆದ ದುರ್ಗಾ ದೌಡ್ ಪಾದಯಾತ್ರೆಗೆ ಯಾವುದೇ ಪೂರ್ವಾನುಮತಿ ಪಡೆದಿಲ್ಲ ಎಂದು ಆರೋಪಿಸಿ ಉಡುಪಿ ಹಿಂದೂ ಜಾಗರಣಾ ವೇದಿಕೆ ಸಂಘಟನೆಯ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಉಡುಪಿ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ಯಾವುದೇ ಪೂರ್ವಾನುಮತಿಯಿಲ್ಲದೆ ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದಿಂದ ಅಂಬಲಪಾಡಿ ಮಹಾಕಾಳಿ ದೇವಸ್ಥಾನದವರೆಗೆ ಪಾದಯಾತ್ರೆಯನ್ನು ನಡೆಸಿ ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುವ ಬಗ್ಗೆ ಸರಕಾರ/ಜಿಲ್ಲಾಧಿಕಾರಿಯವರ ಆದೇಶವನ್ನು ಉಲ್ಲಂಘನೆ ಮಾಡಿರುವುದಾಗಿ ಉಡುಪಿ ನಗರಸಭೆ ಪೌರಾಯುಕ್ತ ಹಾಗೂ ಕೋವಿಡ್ ನೋಡೆಲ್ ಅಧಿಕಾರಿ ಡಾ.ಉದಯ ಕುಮಾರ್ ಶೆಟ್ಟಿ ದೂರು ನೀಡಿದ್ದಾರೆ.
ಇನ್ನು ದೂರಿನನ್ವಯ ಹಿಂದೂ ಜಾಗರಣಾ ವೇದಿಕೆ ಸಂಘಟನೆಯ ಕಾರ್ಯಕರ್ತರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಕಲಂ: 188, 269 ಐಪಿಸಿ ಕಲಂ: 5(1), 5(4) ದ ಕರ್ನಾಟಕ ಅಪಿಡಮಿಕ್ ಡಿಸಿಸ್ ಆ್ಯಕ್ಟ್ 2020 ರಂತೆ ಪ್ರಕರಣ ದಾಖಲಿಸಲಾಗಿದೆ.