ನೆಲ್ಯಾಡಿ: ವಿವಾಹಿತ ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಈ ವಿಚಾರ ತಿಳಿದ ಆಕೆಯ ಪತಿಯೂ ಆತ್ಮಹತ್ಯೆಗೆ ಯತ್ನಿಸಿದ ಕೊಕ್ಕಡ ಗ್ರಾಮದ ಪುತ್ಯೆಯಲ್ಲಿ ಅ.18 ರಂದು ಮಧ್ಯಾಹ್ನ ನಡೆದಿದೆ.
ಪುತ್ಯೆ ನಿವಾಸಿ ರಾಜೇಶ್ ಎಂಬವರ ಪತ್ನಿ ರಶ್ಮಿತಾ(28ವ.) ಆತ್ಮಹತ್ಯೆ ಮಾಡಿಕೊಂಡಿದ್ದು, ವಿಷಯ ತಿಳಿದ ಆಕೆಯ ಪತಿ ರಾಜೇಶ್ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಮಧ್ಯಾಹ್ನ ಮನೆಯಲ್ಲಿ ಯಾರು ಇಲ್ಲದ ವೇಳೆ ರಶ್ಮಿತಾ ಮನೆಯ ಕೋಣೆಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದು, ಸುದ್ದಿ ತಿಳಿದು ಮನೆಗೆ ಆಗಮಿಸಿದ ರಶ್ಮಿತಾರವರ ಪತಿ ರಾಜೇಶ್ ಆತ್ಮಹತ್ಯೆಗೆ ಮುಂದಾಗಿದ್ದು, ಈ ಸಂದರ್ಭದಲ್ಲಿ ಸ್ಥಳೀಯರು ಅವರನ್ನು ರಕ್ಷಿಸಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಧರ್ಮಸ್ಥಳ ಠಾಣಾ ಪೊಲೀಸರು ಭೇಟಿ ನೀಡಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.