ಉಪ್ಪಿನಂಗಡಿ: ದೋಸ್ತ್ ಮೀನಿನ ಲಾರಿ ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ ಗೋಳಿತೊಟ್ಟು ಸಮೀಪ ನಡೆದಿದೆ.
ಮೃತ ದುರ್ದೈವಿಯನ್ನು ಮಂಗಳೂರು ಸಮೀಪದ ಕುಂಟಲ್ಪಾಡಿ ಪದವು ನಿವಾಸಿ ಸಚಿನ್(29) ಎಂದು ಎನ್ನಲಾಗಿದೆ.
ಮೃತ ಸಚಿನ್
ಡಿಕ್ಕಿಯ ರಭಸಕ್ಕೆ ಬೈಕ್ ಸವಾರನ ತಲೆಯ ಮೇಲೆ ಮೀನು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿ ಹರಿದಿದ್ದು, ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಸಹಸವಾರನಿಗೆ ಗಂಭೀರ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ. ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.































