ಸುಬ್ರಹ್ಮಣ್ಯ: ಅಪರಿಚಿತ ಮಹಿಳೆಯ ಮೃತದೇಹವು ಕುಮಾರಧಾರಾ ನದಿಯಲ್ಲಿ ಅ.19 ರಂದು ಪತ್ತೆಯಾಗಿದೆ. ಮೃತ ಮಹಿಳೆಗೆ ಸುಮಾರು 55 ವರ್ಷವಿರಬಹುದೆಂದು ಅಂದಾಜಿಸಲಾಗಿದೆ.
ಗೃಹ ರಕ್ಷಕ ದಳದ ಸಿಬ್ಬಂದಿಗಳು ಸ್ಥಳೀಯರ ನೆರವಿನೊಂದಿಗೆ ಕುಮಾರಧಾರ ನದಿಯಿಂದ ಮೃತ ದೇಹವನ್ನು ಮೇಲೆಕ್ಕೆತ್ತಿದ್ದಾರೆ. ಬಳಿಕ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಮೃತದೇಹವನ್ನು ಇರಿಸಲಾಗಿದೆ.
ಸುಬ್ರಹ್ಮಣ್ಯ ಪೊಲೀಸ್ ಠಾಣಾಧಿಕಾರಿ ಜಂಬೂರಾಜ್ ಮಹಾಜನ್, ಎ ಎಸ್.ಐ ಮೋಹನ್. ಕೆ ಮಹಾಲಕ್ಷ್ಮಿ ಮಹೇಶ್ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.