ಮಂಗಳೂರು: ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜ ಅವರ ಮಂಗಳೂರಿನ ನಿವಾಸಕ್ಕೆ ಬಜರಂಗದಳ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಅ.20 ರಂದು ನಡೆದಿದೆ.
ಐವನ್ ಡಿಸೋಜ ಅವರು ವಾಹಿನಿಯೊಂದರ ಚರ್ಚೆಯಲ್ಲಿ ಬಜರಂಗದಳ ಕಾರ್ಯಕರ್ತರು ಮತ್ತು ಕೇಸರಿ ಬಟ್ಟೆ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನು ವಿರೋಧಿಸಿ ಬಜರಂಗದಳ ಕಾರ್ಯಕರ್ತರು ಐವನ್ ಡಿಸೋಜ ಮನೆಗೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ.
ಸ್ಥಳಕ್ಕಾಗಮಿಸಿದ ಮಂಗಳೂರು ದಕ್ಷಿಣ ಪೊಲೀಸರು ಮುತ್ತಿಗೆ ಯತ್ನವನ್ನು ವಿಫಲಗೊಳಿಸಿದರು ಹಾಗೂ ಬಜರಂಗದಳದ ಕೆಲವು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ತಿಳಿದು ಬಂದಿದೆ.