ಧರ್ಮಸ್ಥಳ: ವಿವಾಹಿತ ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಂಡ್ರುಪ್ಪಾಡಿಯಲ್ಲಿ ಅ.21 ರಂದು ನಡೆದಿದೆ.
ಮುಂಡ್ರುಪ್ಪಾಡಿಯ ಕೂಟದ ಕಲ್ಲು ಬಾಡಿಗೆ ಮನೆ ನಿವಾಸಿ ಮೋಹನ ಎಂಬವರ ಪತ್ನಿ ಸೌಮ್ಯ (29) ಮೃತ ದುರ್ದೈವಿ.
ಇಂದು ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಈಕೆ ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುವುದು ತನಿಖೆಯಿಂದ ಇನ್ನಷ್ಟೇ ತಿಳಿದುಬರಬೇಕಿದೆ.
ಮೃತರು ಪತಿ ಹಾಗೂ ಮಕ್ಕಳನ್ನು ಅಗಲಿದ್ದಾರೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.