ಪುತ್ತೂರು: ಕಾಲೇಜ್ ಬಿಟ್ಟು ಮನೆಗೆ ತೆರಳುತ್ತಿದ್ದ ಕೊಂಬೆಟ್ಟು ಜೂನಿಯರ್ ಕಾಲೇಜ್ ನ ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆ ಪ್ರಕರಣ ಖಂಡನೀಯವಾಗಿದ್ದು, ಆರೋಪಿಗಳನ್ನು ಶೀಘ್ರವಾಗಿ ಬಂಧಿಸಬೇಕು ಎಂದು ಎಸ್.ಎಸ್.ಎಫ್ ಪುತ್ತೂರು ಡಿವಿಶನ್ ಒತ್ತಾಯಿಸಿದೆ.
ಹಲವಾರು ಶಿಕ್ಷಣ ಸಂಸ್ಥೆಗಳನ್ನು ಹೊಂದಿರುವ ಪುತ್ತೂರಿಗೆ ವಿದ್ಯಾರ್ಜನೆಗಾಗಿ ದೂರದ ಊರುಗಳಿಂದ ದಿನನಿತ್ಯ ನೂರಾರು ವಿದ್ಯಾರ್ಥಿಗಳು ಬರುತ್ತಿದ್ದಾರೆ. ಹೀಗಿರುವಾಗ ವಿದ್ಯಾರ್ಥಿಗಳ ಮೇಲಿನ ಹಲ್ಲೆ ಪ್ರಕರಣಗಳು ಆತಂಕವನ್ನು ಮೂಡಿಸುತ್ತಿದೆ. ಕಾನೂನು ಪಾಲಕರು ಆರೋಪಿಗಳನ್ನು ಬಂಧಿಸಿ, ಸೂಕ್ತ ಕಾನೂನು ಕ್ರಮಗಳನ್ನು ಕೈಗೊಂಡು ಇಂತಹ ಪ್ರಕರಣಗಳು ಮತ್ತೆ ಮರುಕಳಿಸದಂತೆ ಎಚ್ಚರವಹಿಸಬೇಕು ಎಂದು ಎಸ್.ಎಸ್.ಎಫ್ ಪ್ರಕಟಣೆಯಲ್ಲಿ ತಿಳಿಸಿದೆ.


























