ಬಂಟ್ವಾಳ: ಕಳೆದ ಒಂದೂವರೆ ವರ್ಷದ ಹಿಂದೆ ಸ್ಥಗಿತವಾಗಿದ್ದ ಶಾಲಾ ಮಕ್ಕಳ ಬಿಸಿಯೂಟ ಶಾಲೆಗಳಲ್ಲಿ ಅ.21ರಿಂದ ಪ್ರಾರಂಭವಾಗಿದ್ದು, ಅದರಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಭದಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ವಿಜಯ ಶೇಖರ್ ಮಕ್ಕಳಿಗೆ ಊಟ ಬಡಿಸುವ ಮೂಲಕ ಚಾಲನೆ ನೀಡಿದರು.
ಶಾಲಾ ಶಿಕ್ಷಕಿ ಸಂಗೀತ ಶರ್ಮ ವಿಶ್ವ ಕೈ ತೊಳೆಯುವ ದಿನಾಚರಣೆ ಪ್ರಯುಕ್ತ ಮಕ್ಕಳಿಗೆ ಕೈ ತೊಳೆಯುವ ವಿಧಾನವನ್ನು ಪ್ರಾಯೋಗಿಕವಾಗಿ ತಿಳಿಸಿದರು.
ಶಾಲಾ ಶಿಕ್ಷಕರು ತಮ್ಮ ಸಂಘದ ನಿರ್ದೇಶನದಂತೆ ತಮ್ಮ ವಿವಿಧ ಬೇಡಿಕೆಗೆ ಸರಕಾರದ ಗಮನ ಸೆಳೆಯಲು ಕಪ್ಪು ಪಟ್ಟಿ ಧರಿಸಿ ಶಾಲೆಗೆ ಹಾಜರಾಗಿ ತಮ್ಮ ಕರ್ತವ್ಯವನ್ನು ನಿರ್ವಹಿಸಿದರು.
ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಕ್ಷೇತ್ರ ಸಮೂಹ ಸಂಪನ್ಮೂಲ ವ್ಯಕ್ತಿ ಮೆಟಿಲ್ಡಾ ಲೋಬೋ, ಮುಖ್ಯಶಿಕ್ಷಕ ಪೂಜಾರಿ ಹಾಗೂ ಶಿಕ್ಷಕ ವೃಂದ, ಮತ್ತು ಅಡುಗೆ ಸಿಬ್ಬಂದಿಗಳು ಉಪಸ್ಥಿತರಿದ್ದರು.