ಬಂಟ್ವಾಳ: ಎರಡು ಟೆಂಪೋಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಬಿ.ಸಿ.ರೋಡ್-ಪೊಳಲಿ ರಸ್ತೆಯ ಕಲ್ಪನೆ ಎಂಬಲ್ಲಿ ನಡೆದಿದೆ.
ಅಪಘಾತದಿಂದಾಗಿ ಓರ್ವ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಲಾರಿಯೊಳಗೆ ಆತನ ಕಾಲು ಜಖಂಗೊಂಡಿದ್ದು, ಸಾರ್ವಜನಿಕರು ಹರಸಾಹಾಸ ಪಟ್ಟು ಆತನನ್ನು ಲಾರಿಯಿಂದ ಹೊರಗೆಳೆದು ಆಸ್ಪತ್ರೆಗೆ ಸಾಗಿಸಿದ್ದಾರೆ. ಘಟನೆಯಿಂದಾಗಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಚಾಲಕರು ಕೆಲಕಾಲ ಸಂಕಷ್ಟ ಅನುಭವಿಸುವಂತಾಗಿತ್ತು. ಸ್ಥಳಕ್ಕೆ ಟ್ರಾಫಿಕ್ ಪೋಲಿಸರು ಆಗಮಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.