ಪುತ್ತೂರು: ಮೂಡಬಿದ್ರೆ ಆಳ್ವಾಸ್ ಕಾಲೇಜಿನ ಸ್ವರಾಜ್ ಮೈದಾನದಲ್ಲಿ ನಡೆದ 36 ನೇ ರಾಜ್ಯ ಜೂನಿಯರ್ ಅಥ್ಲೆಟಿಕ್ಸ್ ಕ್ರೀಡಾಕೂಟದ ಹೈ ಜಂಪ್ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಚರಿತ್ ಪ್ರಕಾಶ್ ಇವರು 1.65ಮೀಟರ್ ಎತ್ತರ ಜಿಗಿಯುವುದರೊಂದಿಗೆ ದ್ವಿತೀಯ ಸ್ಥಾನ ಗಳಿಸಿರುತ್ತಾರೆ. ಈತನು ಸುಳ್ಯ ತಾಲೂಕಿನ ಪಂಜದ ಚಂದ್ರಪ್ರಕಾಶ ಕೆ ಮತ್ತು ಹಂಸವತಿ ದಂಪತಿಗಳ ಪುತ್ರ. ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಅಧ್ಯಾಪಕ ವೃಂದ ಅಭಿನಂದಿಸಿದ್ದಾರೆ.