ಮಂಗಳೂರು: ನಾಗನ ಕಟ್ಟೆಯನ್ನು ಯಾರೋ ಕಿಡಿಗೇಡಿಗಳು ಧ್ವಂಸಗೊಳಿಸಿದ ಘಟನೆ ಕೂಳೂರು ವಿ.ಆರ್.ಎಲ್. ಬಳಿಯಲ್ಲಿ ನಡೆದಿದೆ.
ಅನೇಕ ಸಮಯದಿಂದ ಇಂತಹ ದುಷ್ಕೃತ್ಯ ದಕ್ಷಿಣ ಕನ್ನಡದಲ್ಲಿ ನಡೆಯುತ್ತಿದ್ದು, ಈ ಕೃತ್ಯದ ಹಿಂದಿನ ಕಿಡಿಗೇಡಿಗಳನ್ನು ಪತ್ತೆಹಚ್ಚಿ ಬಂಧಿಸಲು ಹಿಂದೂ ಸಂಘಟನೆಗಳು ಆಗ್ರಹಿಸಿವೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.