ಮಂಗಳೂರು: ಹೋಟೆಲ್ ಮೇಲೆ ದಾಳಿ ಮಾಡಿದ ಬಜರಂಗದಳದ ಕಾರ್ಯಕರ್ತರು ಅಲ್ಲಿ ತಂಗಿದ್ದ ಅನ್ಯಕೋಮಿನ ಜೋಡಿಯನ್ನು ಪೊಲೀಸರಿಗೊಪ್ಪಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಹಾವೇರಿಯ ಅನ್ಯಕೋಮಿನ ಯುವಕ ಹಾಗೂ ವಿಜಯಪುರದ ಹಿಂದೂ ಯುವತಿ ಇಬ್ಬರು ಹೋಟೆಲೊಂದರಲ್ಲಿ ತಂಗಿದ್ದು, ಈ ವಿಷಯ ತಿಳಿಯುತ್ತಿದ್ದಂತೆಯೇ ಬಜರಂಗದಳದ ಕಾರ್ಯಕರ್ತರು ಹೋಟೆಲ್ ಮೇಲೆ ದಾಳಿ ನಡೆಸಿದ್ದು, ಅನ್ಯಕೋಮಿನ ಜೋಡಿಗೆ ಎಚ್ಚರಿಕೆ ನೀಡಿ ಪೊಲೀಸರಿಗೊಪ್ಪಿಸಿದ್ದಾರೆ.
ಯುವಕ-ಯುವತಿಯನ್ನು ಮಂಗಳೂರಿನ ಬಂದರು ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದ್ದು, ಯುವಕ ಯುವತಿಯರಿಬ್ಬರು ಸಾಮಾಜಿಕ ಜಾಲತಾಣದ ಮೂಲಕ ಪರಸ್ಪರ ಪರಿಚಯಗೊಂಡಿದ್ದರು ಎನ್ನಲಾಗಿದೆ.