ಪುತ್ತೂರು: ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್ ರವರ ವತಿಯಿಂದ ಅರ್ಕ ಶ್ರೀಮಹಾದೇವಿ ಭಜನಾ ಮಂಡಳಿಯಿಂದ ಭಜನಾ ಸೇವೆ ಹಾಗೂ ವಿಶೇಷ ಪೂಜೆ ಕಾರ್ಯಕ್ರಮವು ವಿಶ್ವ ಹಿಂದೂ ಪರಿಷದ್ ಪುತ್ತೂರು ಪ್ರವರ್ತಿತ ಶ್ರೀ ವೀರಾಂಜನೇಯ ಕ್ಷೇತ್ರದಲ್ಲಿ ನೆಲಪ್ಪಾಲ್ ನಲ್ಲಿ ಅ.23 ರಂದು ನಡೆಯಿತು.
ಕಾರ್ಯಕ್ರಮದಲ್ಲಿ ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಚಾಲಕರಾದ ಮುರಳಿಕೃಷ್ಣ ಹಸಂತಡ್ಕ, ವಿಶ್ವ ಹಿಂದೂ ಪರಿಷದ್ ನ ಜಿಲ್ಲಾಧ್ಯಕ್ಷರಾದ ಡಾ. ಕೃಷ್ಣ ಪ್ರಸನ್ನ, ಜಿಲ್ಲಾ ಕಾರ್ಯದರ್ಶಿ ಸತೀಶ್ ಬಿ.ಎಸ್. ಪ್ರಖಂಡ ಕಾರ್ಯದರ್ಶಿ ವಿಶಾಖ್ ಸಸಿಹಿತ್ಲು, ರಾಮ್ ಪ್ರಸಾದ್ ಮಯ್ಯ, ಸತ್ಸಂಗ ಪ್ರಮುಖ್ ರವಿಕುಮಾರ್ ಕೈತಡ್ಕ, ಬಜರಂಗದಳ ಸಹಸಂಚಾಲಕ್ ಪ್ರವೀಣ್ ಕಲ್ಲೇಗ ಹಾಗೂ ಮತ್ತಿತರರು ಭಾಗವಹಿಸಿದ್ದರು.