ಪುತ್ತೂರು: ಅನ್ಯಕೋಮಿನ ವ್ಯಕ್ತಿಯೋರ್ವ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರವೆಸಗಿದ ಘಟನೆ ಬಡಗನ್ನೂರು ಗ್ರಾಮದ ಮೈಂದನಡ್ಕ ಸಮೀಪ ನಡೆದಿದೆ.
ಆರೋಪಿಯನ್ನು ಮೈಂದನಡ್ಕ ನಿವಾಸಿ ಆದಂ(56ವ.) ಎಂದು ಗುರುತಿಸಲಾಗಿದೆ. ಆರೋಪಿ ವಿರುದ್ಧ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಆದಂ ಸ್ಥಳೀಯ ಬಾಲಕಿ ಬೀಡಿ ಬ್ರಾಂಚ್ ಗೆ ಹೋಗುತ್ತಿದ್ದ ವೇಳೆ ಕೃತ್ಯ ಎಸಗಿರುವುದಾಗಿ ಆರೋಪಿಸಲಾಗಿದೆ.ಘಟನೆ ಕುರಿತು ಸಂಪ್ಯ ಪೊಲೀಸರು ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

























