ಕಡಬ: ಅಡುಗೆ ತಯಾರಿಸುತ್ತಿದ್ದ ಸಂದರ್ಭದಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹಬ್ಬಿದ ಘಟನೆ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ನೂಜಿಬಾಳ್ತಿಲದಲ್ಲಿ ಅ.25 ರಂದು ನಡೆದಿದೆ. ಸ್ಥಳದಲ್ಲಿದ್ದವರ ಸಮಯ ಪ್ರಜ್ಞೆಯಿಂದಾಗಿ ನಡೆಯಬೇಕಾಗಿದ್ದ ಭಾರೀ ದುರಂತ ತಪ್ಪಿದೆ.
ಅ.25 ರಂದು ಬೆಳಗ್ಗೆ ನೂಜಿಬಾಳ್ತಿಲ ಶಾಲೆಯಲ್ಲಿ ಅಡುಗೆ ಮಾಡುವ ಕೊಠಡಿಯಲ್ಲಿ ಗ್ಯಾಸ್ ಉರಿಸುವ ಸಂದರ್ಭದಲ್ಲಿ ಗ್ಯಾಸ್ ಅಂಡೆಯ ಪೈಪ್ ನಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ತಗುಲಿದೆ.
ಕೂಡಲೇ ಸ್ಥಳದಲ್ಲಿದ್ದವರು ಕಾರ್ಯ ಪ್ರವೃತರಾಗಿ ಅಪಾಯ ಸಂಭವಿಸದಂತೆ ಮುನ್ನಚ್ಚರಿಕೆ ವಹಿಸಿದ್ದಾರೆ. ಅಡುಗೆ ಸಿಬ್ಬಂದಿಗಳು ಹಾಗೂ ಸ್ಥಳೀಯರು ಕಿಟಕಿ ಮೂಲಕ ಬೆಂಕಿ ನಂದಿಸುವ ಉಪಕರಣದ ಸಹಾಯದಿಂದ ಬೆಂಕಿ ನಂದಿಸಿ, ಹೆಚ್ಚಿನ ಅಪಾಯ ಸಂಭವಿಸದಂತೆ ಮಾಡಿದರು.
ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು. ಶಿಕ್ಷಕರು, ಎಸ್.ಡಿ.ಎಂ.ಸಿ. ಸಮಿತಿಯವರು, ಪೋಷಕರು, ನೂಜಿಬಾಳ್ತಿಲ ಗ್ರಾ.ಪಂ.ನವರು ಭೇಟಿ ನೀಡಿದ್ದಾರೆ.