ಬೆಳ್ತಂಗಡಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನಲೆಯಲ್ಲಿ ವ್ಯಕ್ತಿಯೋರ್ವನ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಮದ್ದಡ್ಕ ನಿವಾಸಿ ದಿಲೀಪ್ ಮದ್ದಡ್ಕ ಎನ್ನಲಾಗಿದೆ.
ದಿಲೀಪ್ ಸಮೀಪದ ಸರಕಾರಿ ಶಾಲೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿಗೆ ಪರಿಚಿತನಾಗಿದ್ದ, ಅಪ್ರಾಪ್ತ ಬಾಲಕಿಯ ಬಳಿಯಿದ್ದ ಮೊಬೈಲ್ ಫೋನ್ ನಂಬರ್ ಅನ್ನು ಪಡೆದುಕೊಂಡು ಮೊಬೈಲ್ ಮೂಲಕ ಕರೆಮಾಡಿ ಲೈಂಗಿಕ ಕಿರುಕುಳ ನೀಡಿದ್ದ, ಅಷ್ಟೇ ಅಲ್ಲದೇ ಅಸಭ್ಯ ರೀತಿಯಲ್ಲಿ ಸಂದೇಶ ಮತ್ತು ವಾಟ್ಸಪ್ ಮೂಲಕ ಅಶ್ಲೀಲ ಚಿತ್ರಗಳನ್ನು ಕಳುಹಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.