ಬ್ಯಾಂಕ್ ಸಿಬಂದಿ ನೇಮಕಾತಿ ಸಂಸ್ಥೆ ದೇಶದ 11 ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಸರಿಸುಮಾರು 4,135 ಹುದ್ದೆಗಳಿಗೆ ಪೂರ್ವ ಭಾವಿ ಹಾಗೂ ಮುಖ್ಯ ಪರೀಕ್ಷೆ, ಸಂದರ್ಶನ ನಡೆಸಲು ತೀರ್ಮಾನಿಸಿದೆ.
ಪರಿಶಿಷ್ಟ ಜಾತಿಯವರಿಗೆ 679, ಪರಿಶಿಷ್ಟ ಪಂಗಡದವರಿಗೆ 350, ಹಿಂದುಳಿದ ವರ್ಗ ದವರಿಗೆ 1102, ಸಾಮಾನ್ಯ ವರ್ಗದವರಿಗೆ 1,600, ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ 404 ಹುದ್ದೆ ಗಳು ದೇಶಾದ್ಯಂತ ಮೀಸಲಾಗಿವೆ. ರಾಜ್ಯದ 12 ಜಿಲ್ಲಾ ಕೇಂದ್ರಗಳಲ್ಲಿ ಪೂರ್ವಭಾವಿ ಪರೀಕ್ಷೆ ಮತ್ತು 3 ಜಿಲ್ಲಾ ಕೇಂದ್ರಗಳಲ್ಲಿ ಮುಖ್ಯ ಪರೀಕ್ಷೆ ಆನ್ಲೈನ್ನಲ್ಲಿ ನಡೆಯಲಿದೆ.
ಯಾವ ಬ್ಯಾಂಕ್ನಲ್ಲಿ ಎಷ್ಟು ಹುದ್ದೆ..?
ಕೆನರಾ ಬ್ಯಾಂಕ್ 650, ಯೂನಿಯನ್ ಬ್ಯಾಂಕ್ಆಫ್ ಇಂಡಿಯಾ 912, ಯೂಕೋ ಬ್ಯಾಂಕ್ 440, ಪಂಜಾಬ್ ಆ್ಯಂಡ್ ಸಿಂಧ್ ಬ್ಯಾಂಕ್ 427,ಇಂಡಿಯನ್ ಓವರ್ಸೀಸ್ ಬ್ಯಾಂಕ್ 98, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 620, ಬ್ಯಾಂಕ್ ಆಫ್ ಮಹಾರಾಷ್ಟ್ರ 400, ಬ್ಯಾಂಕ್ ಆಫ್ ಇಂಡಿಯಾ 588 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುವುದಾಗಿ ಪ್ರಕಟಿಸಿವೆ.
ಶೈಕ್ಷಣಿಕ ಅರ್ಹತೆ
ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಯಾವುದೇ ವಿಷಯದಲ್ಲಿ ಪದವಿ ಅಥವಾ ಕೇಂದ್ರ ಸರಕಾರದಿಂದ ಮಾನ್ಯತೆ ಪಡೆದ ಯಾವುದೇ ಸಮಾನ ಅರ್ಹತೆ.
ಅರ್ಜಿ ಸಲ್ಲಿಕೆ ವಿಧಾನ: ಆನ್ಲೈನ್.
ಅರ್ಜಿ ಸಲ್ಲಿಕೆ ದಿನಾಂಕ: ಅ.20ರಿಂದ ನ.10 ರವರೆಗೆ. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ನಿಮ್ಮ ಆಯ್ಕೆಯ ಬ್ಯಾಂಕ್ನ ಆದ್ಯತೆಯ ಆದೇಶವನ್ನು ಆನ್ಲೈನ್ ಅರ್ಜಿ ನಮೂನೆಯಲ್ಲಿ ಅಳವಡಿಸಲಾಗಿದೆ. ಅಭ್ಯರ್ಥಿಗಳು ಈ ಹಂತದಲ್ಲಿ ಅವರ ಬ್ಯಾಂಕ್ಗಳ ಆದ್ಯತೆಯ ಕ್ರಮವನ್ನು ಅಗತ್ಯವಾಗಿ ಸೂಚಿಸಬೇಕು.
ಪರೀಕ್ಷೆ ಪ್ರಕ್ರಿಯೆ
– ಮೊದಲ ಹಂತ: ಆನ್ಲೈ ನ್ ಪೂರ್ವಭಾವಿ ಪರೀಕ್ಷೆ -ನ.4 ಹಾಗೂ ಡಿ.11
-ಎರಡನೇ ಹಂತ: ಆನ್ಲೈನ್ ಮುಖ್ಯ ಪರೀಕ್ಷೆ -ಜನವರಿ, 2022
-ಮೂರನೇ ಹಂತ: ಸಂದರ್ಶನ -ಫೆಬ್ರವರಿ /ಮಾರ್ಚ್, 2022
ವಯೋಮಿತಿ
01.10.2021ಕ್ಕೆ, 21 ವರ್ಷಕ್ಕಿಂತ ಕಡಿಮೆ ಇರಬಾರದು. ಮತ್ತು 1.10.2021ಕ್ಕೆ 30 ವರ್ಷಗಳಿಗಿಂತ ಹೆಚ್ಚಿರ ಬಾರದು. ಅಂದರೆ 21 ವರ್ಷದಿಂದ 30 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅಂದ ರೆ ಅಭ್ಯರ್ಥಿಗಳು 02.10.1991ಕ್ಕಿಂತ ಮುಂಚಿತವಾಗಿ ಮತ್ತು 01.10.2001ಕ್ಕಿಂತ ಅನಂತರ ಜನಿಸಿರಬಾರದು. (ಎರಡೂ ದಿನಾಂಕಗಳು ಒಳಗೊಂಡಂತೆ) ಎಸ್ಸಿ/ ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರ ಹಿಂದುಳಿದ ವರ್ಗ ಗಳ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ರಿಗೆ 10 ವರ್ಷ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ
850 ರೂ. ಉಳಿದೆಲ್ಲ ಅಭ್ಯರ್ಥಿಗಳಿಗೆ (ಎಖಖ ಸೇರಿ) (ಎಸ್ಸಿ/ಎಸ್ಟಿ/ಕಗಆಈ/ ಉಗಿಖM ಅಭ್ಯ ರ್ಥಿ ಗಳಿಗೆ 175 ರೂ. (ಎಖಖ ಸೇರಿ) ಆನ್ಲೈನ್ ನಲ್ಲಿಯೇ ಅರ್ಜಿ ಶುಲ್ಕವನ್ನೂ ಪಾವತಿಸಬೇಕಿರುತ್ತದೆ.