ಪುತ್ತೂರು: ಆಟೋ ರಿಕ್ಷಾವೊಂದರಲ್ಲಿ ವ್ಯಕ್ತಿಯೊಬ್ಬರು ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರು ಸಂಪ್ಯ ಪೊಲೀಸರಿಗೆ ದೂರು ನೀಡಿದ ಘಟನೆ ಬಡಗನ್ನೂರು ಗ್ರಾಮದ ಮೈಂದನಡ್ಕದಲ್ಲಿ ಪ್ರಕರಣದ ಅ.26 ರಂದು ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಬಡಗನ್ನೂರು ವ್ಯಾಪ್ತಿಯ ಮೈಂದನಡ್ಕದಲ್ಲಿ ಆಟೋ ರಿಕ್ಷಾದಲ್ಲಿ ಹೋಗುತ್ತಿದ್ದ ಮಹಿಳೆಗೆ ಪದಡ್ಕದ ಅನಿಲ್ ಎಂಬ ವ್ಯಕ್ತಿ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.