ಉಪ್ಪಿನಂಗಡಿ: ವ್ಯಕ್ತಿಯೋರ್ವರು ಬಸ್ ನಿಲ್ದಾಣ ಪಂಚಾಯತ್ ಕಾಂಪ್ಲೆಕ್ಸ್ ನ ಪ್ರಥಮ ಮಹಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.27 ರಂದು ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವರನ್ನು ಬಜತ್ತೂರು ಡೆಂಬಲೆ ನಿವಾಸಿ ರಾಮಣ್ಣ ಪೂಜಾರಿ(55) ಎಂದು ಗುರುತಿಸಲಾಗಿದೆ.
ರಾಮಣ್ಣ ಪೂಜಾರಿ ಯವರು ಕೆಲ ದಿನಗಳ ಹಿಂದೆ ಮನೆ ಬಿಟ್ಟು ಹೋಗಿದ್ದು, ಇಂದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.