ಪುತ್ತೂರು: ಕಾಲೇಜಿನ ನಿಯಮ ಹಾಗೂ ವಿದ್ಯಾರ್ಥಿಗಳ ಪಠ್ಯೇತರ ಚಟುವಟಿಕೆಗಳನ್ನು ಪ್ರಕಟಿಸಲು ಕಾಲೇಜಿನ ವಾರ್ಷಿಕ ಸಂಚಿಕೆ ಅತ್ಯಗತ್ಯ. ಇದರಿಂದ ವಿದ್ಯಾರ್ಥಿಗಳ ಬರವಣಿಗೆ ಕೌಶಲ್ಯವು ಅನಾವರಣಗೊಳ್ಳಲು ಸಾಧ್ಯವಾಗುತ್ತದೆ ಎಂದು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮಹೇಶ್ ನಿಟಿಲಾಪುರ ಹೇಳಿದರು.
ಅವರು ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ಆಶ್ರಯದಲ್ಲಿ ಸ್ನಾತಕೋತ್ತರ ಸೆಮಿನಾರ್ ಹಾಲ್ನಲ್ಲಿ ನಡೆದ ‘ಜಾಗೃತಿ’ ವಾರ್ಷಿಕ ಸಂಚಿಕೆ ಬಿಡುಗಡೆ ಸಮಾರಂಭದಲ್ಲಿ ಶುಕ್ರವಾರ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿ ಆಡಳಿತ ಮಂಡಳಿಯ ಕೋಶಾಧಿಕಾರಿ ಸೇಡಿಯಾಪು ಜನಾರ್ಧನ್ ಭಟ್ ಮಾತನಾಡಿ ವಿದ್ಯಾರ್ಥಿಗಳನ್ನು ಜಾಗೃತರನ್ನಾಗಿ ಮಾಡುವಲ್ಲಿ ಪತ್ರಿಕೆ ಪ್ರಮುಖ ಪಾತ್ರ ವಹಿಸುತ್ತದೆ. ತಂತ್ರಜ್ಞಾನ ಯುಗದಲ್ಲಿ ಕೃಷಿಯತ್ತ ಒಲವು ಕಡಿಮೆಯಾಗಿದೆ.
ಆ ನಿಟ್ಟಿನಲ್ಲಿ ಕೃಷಿಗೆ ಪೂರಕವಾದ ಲೇಖನಗಳನ್ನು ನಿಯತಕಾಲಿಕೆ ಪ್ರಕಟಿಸಿದಾಗ ವಿದ್ಯಾರ್ಥಿಗಳಲ್ಲಿ ಆಸಕ್ತಿ ಹೆಚ್ಚಿಸಬಹುದು ಎಂದು ಅಭಿಪ್ರಾಯಪಟ್ಟರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ ವಿಷ್ಣು ಗಣಪತಿ ಭಟ್ ಮಾತನಾಡಿ ವಾರ್ಷಿಕ ಸಂಚಿಕೆಯ ಸಂಪಾದಕ ವೃಂದದವರಿಗೆ ಅಭಿನಂದನೆ ಸಲ್ಲಿಸಿದರು. ಸ್ನಾತಕೋತ್ತರ ವಿಭಾಗದ ಸಂಯೋಜಕಿ ಡಾ ವಿಜಯ ಸರಸ್ವತಿ ಉಪಸ್ಥಿತರಿದ್ದರು.ವಿವೇಕಾನಂದ ಕಾಲೇಜಿನ ಆಂಗ್ಲ ವಿಭಾಗದ ಮುಖ್ಯಸ್ಥ ಭಾಲಕೃಷ್ಣ ಹೊಸಮನೆ ಸ್ವಾಗತಿಸಿ, ಹಿಂದಿ ವಿಭಾಗದ ಮುಖ್ಯಸ್ಥೆ ಡಾ. ದುರ್ಗಾರತ್ನ ವಂದಿಸಿದರು. ಸ್ನಾತಕೋತ್ತರ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ವೈಷ್ಣವಿ ಅಡಿಗ ಪ್ರಾರ್ಥಿಸಿದರು. ಕನ್ನಡ ವಿಭಾಗದ ಉಪನ್ಯಾಸಕ ಡಾ ಮನಮೋಹನ್ ಎಂ ಪ್ರಸ್ತಾವಿಸಿ, ಕಾರ್ಯಕ್ರಮವನ್ನು ನಿರೂಪಿಸದರು.