ಬೆಳ್ತಂಗಡಿ: ವಿದ್ಯಾರ್ಥಿ ಸಂಘಟನೆಯೊಂದರಲ್ಲಿ ಗುರುತಿಸಿದ್ದಾನೆ ಎಂಬ ನೆಪವನ್ನೊಡ್ಡಿ ಕಾಲೇಜಿನಿಂದ ವಿದ್ಯಾರ್ಥಿಯನ್ನು ಡಿಬಾರ್ ಮಾಡಿದ ಘಟನೆಯು ಬೆಳ್ತಂಗಡಿ ವಾಣಿ ಪಿಯು ಕಾಲೇಜಿನಲ್ಲಿ ನಡೆದಿದೆ.
ಕಳೆದ 19 ದಿನಗಳಿಂದ ಸಂಸ್ಥೆಯೊಂದಿಗೆ ಕಾಲೇಜಿಗೆ ಸೇರಿಸುವಂತೆ ವಿನಂತಿ ಮಾಡಿದ್ದರೂ ಮಣಿಯದ ಸಂಸ್ಥೆಯು ಕಾಲೇಜಿನಿಂದ ಹೊರಹಾಕಿದೆ. ನ್ಯಾಯಕ್ಕಾಗಿ ವಿದ್ಯಾರ್ಥಿಯು ಕಾಲೇಜಿನ ಮುಂಭಾಗ ಒಂಟಿ ಪ್ರತಿಭಟನೆ ನಡೆಸುತ್ತಿದ್ದಾನೆ.
ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಂದುವರೆಸಬೇಕು, ಡಿಬಾರ್ ಹಿಂಪಡೆಯಬೇಕೆಂದು ವಿದ್ಯಾರ್ಥಿ ಆಗ್ರಹಿಸುತ್ತಿದ್ದಾನೆ.
ಇತ್ತೀಚೆಗೆ ವಾಣಿ ಪದವಿ ಪೂರ್ವ ಕಾಲೇಜಿನ ಕೆಲವು ವಿದ್ಯಾರ್ಥಿಗಳು ಕಾಲೇಜಿನ ನಿಯಮಗಳನ್ನು ಪಾಲಿಸದೆ ವಿಧ್ಯಾರ್ಥಿ ಸಂಘಟನೆಯೊಂದರಲ್ಲಿ ಗುರುತಿಸಿಕೊಂಡ ಬಗ್ಗೆ ಕಾಲೇಜಿನಲ್ಲಿ ವಿವಾದ ಸೃಷ್ಟಿಯಾಗಿತ್ತು. ಈ ಸಂಬಂಧ ಎಂಟು ವಿದ್ಯಾರ್ಥಿಗಳ ವಿರುದ್ದ ಕಾಲೇಜು ಆಡಳಿತ ಮಂಡಳಿ ಶಿಸ್ತು ಕ್ರಮ ಕೈಗೊಂಡಿತ್ತು.