ಪುತ್ತೂರು: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಪುತ್ತೂರಿನ ಪ್ರತಿಷ್ಠಿತ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕರನ್ನು ಬಂಧಿಸಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಯಾಸ್ ಪಿಂಟೋ ರವರಿಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.
ಪುತ್ತೂರಿನ ಪ್ರತಿಷ್ಠಿತ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋ ಅದೇ ಕಾಲೇಜಿನ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಠಾಣೆಗೆ ದೂರು ನೀಡಿಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದ್ದು, ಇದೀಗ ಜಾಮೀನು ಮಂಜೂರು ಮಾಡಿದೆ ಎಂದು ತಿಳಿದು ಬಂದಿದೆ.
ಎಲ್ಯಾಸ್ ಪಿಂಟೋ ರವರ ಪರವಾಗಿ ಖ್ಯಾತ ವಕೀಲರಾದ ಮಹೇಶ್ ಕಜೆ ವಾದಿಸಿದರು.