ಪುತ್ತೂರು: ಬಡಗನ್ನೂರಿನಲ್ಲಿ ತೋಟದ ಕೆಲಸಕ್ಕೆ ಬರುತ್ತಿದ್ದ ಅಪ್ರಾಪ್ತ ದಲಿತ ಬಾಲಕಿಯನ್ನು ಅತ್ಯಾಚಾರ ನಡೆಸಿ ಆಕೆ ಮಗುವಿಗೆ ಜನ್ಮ ನೀಡಲು ಕಾರಣವಾಗಿದ್ದಾರೆ ಎಂದು ಆರೋಪಿಸಿರುವ ಕುದ್ಕಾಡಿ ನಾರಾಯಣ ರೈಯವರನ್ನು ವಿಚಾರಣೆಗಾಗಿ ಪುತ್ತೂರು ಸೆಷೆನ್ಸ್ ನ್ಯಾಯಾಲಯ ಎರಡು ದಿನ ಪೊಲೀಸರ ವಶಕ್ಕೆ ಒಪ್ಪಿಸಿ ಆದೇಶ ನೀಡಿದೆ. ಆದರೇ ನಾರಾಯಣ ರೈ ಯವರ ಅನಾರೋಗ್ಯದಲ್ಲಿ ಏರುಪೇರಾದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಕೆಲದಿನಗಳಿಂದ ಈ ಅತ್ಯಾಚಾರ ವಿಚಾರವು ಬಹಳ ಚರ್ಚೆಯಾಗುತ್ತಿದ್ದು, ಇಂದು ನ್ಯಾಯಾಲಯಕ್ಕೆ ಹಾಜರಾಗಿದ್ದ ಆರೋಪಿ ನಾರಾಯಣ್ ರೈ ಯವರನ್ನು ನ್ಯಾಯಾಲಯವೂ ಪೊಲೀಸ್ ಕಸ್ಟಡಿಗೆ ನೀಡಿದ್ದು, ನಾರಾಯಣ್ ರೈ ಯವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.