ಬೆಂಗಳೂರು, ಜ.18: 2020-23ನೆ ಸಾಲಿನ ಬಿಜೆಪಿ ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಕಾರ್ಯಕಾರಿಣಿ ಸದಸ್ಯರನ್ನಾಗಿ 27 ಮಂದಿಯನ್ನು ನೇಮಕ ಮಾಡಿ ಮೋರ್ಚಾದ ರಾಜ್ಯಅಧ್ಯಕ್ಷ ಮುಝಮ್ಮಿಲ್ ಅಹ್ಮದ್ ಬಾಬು ಆದೇಶ ಹೊರಡಿಸಿದ್ದಾರೆ.
ಇದರಲ್ಲಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಸಾಮಾಜಿಕ ಜಾಲತಾಣದ ಸದಸ್ಯರಾಗಿರುವ ಸಂದೀಪ್ ಲೋಬೋ ಬಿಜೆಪಿ ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿ ನೇಮಕಗೊಂಡಿದ್ದಾರೆ.