ಮೂಡುಬಿದ್ರೆ: ಕಾಲೇಜು ವಿದ್ಯಾರ್ಥಿಗಳ ಇತ್ತಂಡಗಳ ಮಧ್ಯೆ ಹೊಡೆದಾಟ ನಡೆದು ಇಬ್ಬರು ಆಸ್ಪತ್ರೆಗೆ ದಾಖಲಾದ ಘಟನೆ ಮೂಡುಬಿದ್ರೆಯ ತೋಡಾರು ಎಂಬಲ್ಲಿ ವರದಿಯಾಗಿದೆ.
ತೋಡಾರು ಸಮೀಪ ಇರುವ ಖಾಸಗಿ ಇಂಜಿನಿಯರಿಂಗ್ ಕಾಲೇಜೊಂದರಲ್ಲಿ ಮೆಕ್ಯಾನಿಕ್ ಮತ್ತು ಎಲೆಕ್ಟ್ರಿಕಲ್ ವಿಭಾಗದ ವಿದ್ಯಾರ್ಥಿಗಳ ಗುಂಪುಗಳ ಮಧ್ಯೆ ಹೊಡೆದಾಟ ನಡೆದು ಇಬ್ಬರು ವಿದ್ಯಾರ್ಥಿಗಳು ಚಿಕಿತ್ಸೆಗಾಗಿ ಮೂಡಬಿದಿರೆ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹೊಡೆದಾಟದ ಸಂಬಂಧ ಪ್ರಾಂಶುಪಾಲರು ಉಭಯ ತಂಡಗಳ ತಲಾ 4ರಂತೆ 8 ಮಂದಿಯನ್ನು ನಿನ್ನೆ ಅಮಾನತುಗೊಳಿಸಿ ಮನೆಗೆ ಕಳುಹಿಸಿದ್ದರು. ಮತ್ತೆ ಈ ಗುಂಪು ಕಾಲೇಜಿನ ಹೊರಗಡೆ ಹೊಡೆದಾಟ ನಡೆಸಿದ್ದು, ತೃತೀಯ ವರ್ಷದ ನಾಲ್ಕು ಮಂದಿಯ ಮೇಲೆ ಅಂತಿಮ ವರ್ಷದ ವಿದ್ಯಾರ್ಥಿಗಳ 40 ಮಂದಿಯ ತಂಡ ಹಲ್ಲೆ ನಡೆಸಿದ್ದು, ಇಬ್ಬರು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಕಾಲೇಜಿನ ಪ್ರಾಂಶುಪಾಲರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.




























