ಪುತ್ತೂರು: ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ಗಾಂಧಿ ಗ್ರಾಮ ಸ್ವರಾಜ್ಯ ಕಾರ್ಯಕ್ರಮದ ಸಮಾರೋಪ ಸಮಾರಂಭವು ಅ.29 ರಂದು ಪುತ್ತೂರು ಕಿಲ್ಲೆ ಮೈದಾನದಲ್ಲಿ ನಡೆಯಲಿದೆ.
ಸ್ವಾತಂತ್ರ್ಯ ಪೂರ್ವದ ಸನ್ನಿವೇಶಗಳು, ಸ್ವಾತಂತ್ರ್ಯ ನಂತರ ಕಾಂಗ್ರೆಸ್ ಈಗಾಗಲೇ ಗ್ರಾಮ ಮಟ್ಟದಲ್ಲಿ ಈ ದೇಶಕ್ಕೆ ನೀಡಿದ ಕೊಡುಗೆಗಳನ್ನು ಬಿತ್ತರಿಸುವ ಕಾರ್ಯಕ್ರಮವು ಯಶಸ್ವಿಯಾಗಿ ನಡೆದಿತ್ತು.
ಸಮಾರೋಪ ಕಾರ್ಯಕ್ರಮದ ದಿಕ್ಸೂಚಿ ಭಾಷಣಕಾರರಾಗಿ ವಾಗ್ಮಿ ಕೆಪಿಸಿಸಿ ವಕ್ತಾರ ನಿಕೇತ್ ರಾಜ್ ಮೌರ್ಯ ಆಗಮಿಸಲಿದ್ದಾರೆ.
ಎಐಸಿಸಿ ಕಾರ್ಯದರ್ಶಿ ಪಿ.ವಿ. ಮೋಹನ್, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಸಹಿತ ಹಲವಾರು ಗಣ್ಯ ಅತಿಥಿಗಳು ಆಗಮಿಸಿಲಿದ್ದಾರೆ.
ಕಾರ್ಯಕ್ರಮದ ಪ್ರಾರಂಭದಲ್ಲಿ ಬ್ಲಾಕ್ ಕಾಂಗ್ರೆಸ್ ಕಚೇರಿ ಬಳಿಯಿಂದ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು, ಪದಾಧಿಕಾರಿಗಳಿಂದ ಕಿಲ್ಲೆ ಮೈದಾನದ ತನಕ ನಡಿಗೆ ನಡೆಯಲಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ ತಿಳಿಸಿದ್ದಾರೆ.