ಪುತ್ತೂರು: ಸಾಲ್ಮರ ಕಟ್ಟೆ ರೈಲ್ವೇ ಟ್ರಾಕ್ ಬಳಿಯ ಬಾವಿಯಲ್ಲಿ ಅಪರಿಚಿತ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾದ ಘಟನೆ ಅ.29 ರಂದು ನಡೆದಿದೆ.
ಸುಮಾರು 45-55 ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವರ ಮೃತದೇಹ ಬಾವಿಯಲ್ಲಿ ಪತ್ತೆಯಾಗಿದ್ದು, ಬಾವಿಯ ಕಟ್ಟೆಯ ಮೇಲೆ ವ್ಯಕ್ತಿಯ ಚಪ್ಪಲಿ ಸಹ ಪತ್ತೆಯಾಗಿದೆ. ಮೃತದೇಹ ಕೊಳೆತ ಸ್ಥಿತಿಯಲ್ಲಿದ್ದು, ಎರಡು, ಮೂರು ದಿನಗಳ ಹಿಂದೆಯೇ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.