ನಟ ಪುನೀತ್ ರಾಜ್ಕುಮಾರ್ ರವರ ಆರೋಗ್ಯದಲ್ಲಿ ಇಂದು (ಅ.29) ಏರುಪೇರು ಉಂಟಾಗಿದ್ದು, ಕೂಡಲೇ ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡುತ್ತಿದ್ದಾರೆ. ಈ ಸುದ್ದಿ ಅವರ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಪುನೀತ್ ಆರೋಗ್ಯದ ಬಗ್ಗೆ ಹಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
ಶುಕ್ರವಾರ ಬೆಳಗ್ಗೆ ಜಿಮ್ನಲ್ಲಿ ವರ್ಕೌಟ್ ಮಾಡುವಾಗ ಪುನೀತ್ ರಾಜ್ಕುಮಾರ್ ಅವರಿಗೆ ಆರೋಗ್ಯ ಸಮಸ್ಯೆ ಉಂಟಾಯಿತು. ಹೃದಯಕ್ಕೆ ಸಂಬಂಧಿಸಿದ ಸಮಸ್ಯೆ ಕಾಣಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಕುಟುಂಬದವರು ಅಧಿಕೃತವಾಗಿ ಇನ್ನಷ್ಟೇ ಪ್ರತಿಕ್ರಿಯೆ ನೀಡಬೇಕಿದೆ. ಸದ್ಯ ಪುನೀತ್ ರಾಜ್ಕುಮಾರ್ ಅವರಿಗೆ ಇಸಿಜಿ ಮಾಡಲಾಗಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.