ಹೆಬ್ರಿ: ಶಿವಮೊಗ್ಗದಿಂದ ಹೆಬ್ರಿ ಕಡೆಗೆ ಬರುತ್ತಿದ್ದ ಈಚರ್ ವಾಹನ ಪಲ್ಟಿಯಾಗಿ ಅದರಲ್ಲಿದ್ದ ನಾಲ್ವರು ಮೃತಪಟ್ಟು, ಐವರು ಗಂಭೀರ ಗಾಯಗೊಂಡ ಘಟನೆ ಆಗುಂಬೆ ಘಾಟಿಯ ತಿರುವಿನಲ್ಲಿ ನಡೆದಿದೆ.
ಲಾರಿ ಘಾಟಿಯನ್ನು ಇಳಿಯುವಾಗ ನಿಯಂತ್ರಣ ತಪ್ಪಿ ಈ ದುರಂತ ಸಂಭವಿಸಿದ್ದು, ಗಾಯಾಳುಗಳನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟವರನ್ನು ಕಾರ್ಕಳ ತಾಲೂಕಿನ ಮಿಯ್ಯಾರಿನವರು ಎನ್ನಲಾಗಿದೆ.
ಲಾರಿಯೂ ಪ್ರಪಾತಕ್ಕೆ ಮುಗಿಚಿ ಬಿದ್ದಿದ್ದು, ಮೃತದೇಹಗಳನ್ನು ಮೇಲೆತ್ತಲು ಸ್ಥಳೀಯರು ಹರಸಾಹಸ ಪಡುತ್ತಿದ್ದಾರೆ. ಹೆಬ್ರಿ ಮತ್ತು ಆಗುಂಬೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.