ಮಂಗಳೂರು: ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಪ್ರಕರಣದ ಆರೋಪಿ ನ್ಯಾಯವಾದಿಗೆ ಕೆ.ಎಸ್.ಎನ್ ರಾಜೇಶ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕರಿಸಿದೆ.
ಈ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಧ್ರುವ, ಮಹಾಲಕ್ಷ್ಮಿ ಹೆಗ್ಡೆ, ಶಿವಾನಂದ ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿಸಿಕೊಳ್ಳಲು. ರಾಜೇಶ್ ತಲೆಮರೆಸಿಕೊಳ್ಳಲು ಸಹಕರಿಸಿ ಬಂಧಿಸಲ್ಪಟ್ಟ ಅನಂತ್ ಭಟ್ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ.
ಕಾನೂನು ಮಹಾ ವಿದ್ಯಾಲಯದಲ್ಲಿ ವಿದ್ಯಾರ್ಥಿನಿಯಾಗಿರುವ ಸಂತ್ರಸ್ತೆ ಆಗಸ್ಟ್ 8ರಿಂದ ನ್ಯಾಯವಾದಿಯ ಕರಂಗಲ್ಪಾಡಿ ಕಚೇರಿಯಲ್ಲಿ ಇಂಟರ್ನ್‌ಶಿಪ್‌ಗೆ ಸೇರಿದ್ದರು. ಈ ನಡುವೆ ವಕೀಲ ರಾಜೇಶ್ ಭಟ್ ಯುವತಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದನೆಂದು ಆರೋಪಿಸಲಾಗಿದೆ. ಸೆ. 25ರಂದು ತನ್ನ ಚೇಂಬರ್‌ಗೆ ಕರೆದು ಅಸಭ್ಯವಾಗಿ ವರ್ತಿಸಿದ್ದು, ಅತ್ಯಾಚಾರಕ್ಕೆ ಯತ್ನಿಸಿದ್ದಾಗಿ ಯುವತಿ ದೂರಿನಲ್ಲಿ ತಿಳಿಸಿದ್ದರು. .ಕಚೇರಿಯಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ರಾಜೇಶ್ ವಿರುದ್ಧ ಅ. 18ರಂದು ಎರಡು ಪ್ರಕರಣ ದಾಖಲಾಗಿತ್ತು.