ಪೆರ್ಲ: ವಿಟ್ಲ ಪದವಿ ಕಾಲೇಜಿನ ವಿದ್ಯಾರ್ಥಿನಿಯ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಆಕೆಯ ಮನೆಯಲ್ಲಿ ಪತ್ತೆಯಾದ ಘಟನೆ ಕಾಸರಗೋಡು ಜಿಲ್ಲೆಯ ಪೆರ್ಲದಲ್ಲಿ ಅ.29 ರಂದು ನಡೆದಿದೆ.
ಮೃತ ಯುವತಿಯನ್ನು ಪೆರ್ಲ ಸಮೀಪದ ಬಜಕೂಡ್ಲು ನಿವಾಸಿ ಮಹಾಲಿಂಗ ನಾಯ್ಕ – ಕುಮುದಾಕ್ಷಿ ದಂಪತಿಗಳ ಪುತ್ರಿ ಶ್ರಾವ್ಯ (20) ಎಂದು ಗುರುತಿಸಲಾಗಿದೆ.
ಶ್ರಾವ್ಯ ವಿಟ್ಲದ ಪದವಿ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದಳು.
ಅ.29 ರಂದು ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಈಕೆ ತನ್ನ ಕೋಣೆಯಲ್ಲಿ ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ. ಕೃಷಿ ಕುಟುಂಬವಾಗಿದ್ದು, ತಂದೆ-ತಾಯಿ ಮಧ್ಯಾಹ್ನ ತೋಟದ ಕೆಲಸ ಮುಗಿಸಿ ವಾಪಸ್ಸು ಬಂದಾಗ ಕೃತ್ಯ ಬೆಳಕಿಗೆ ಬಂದಿದೆ.
ಮೃತರು ತಂದೆ, ತಾಯಿ, ಇಬ್ಬರು ಸಹೋದರಿಯರು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ. ಘಟನೆ ಬಗ್ಗೆ ಪೋಲಿಸರು ದೂರು ದಾಖಲಿಸಿಕೊಂದಿದ್ದು, ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.