ಮಂಗಳೂರು: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಜೀಪು ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ಬೈಕಂಪಾಡಿಯಲ್ಲಿ ಅ.29 ರಂದು ರಾತ್ರಿ ನಡೆದಿದೆ.
ಮೃತರನ್ನು ಗೋಳಿತೊಟ್ಟು ಶಾಂತಿನಗರ ನಿವಾಸಿ ರವೀಂದ್ರ ಆಚಾರಿ(40) ಎನ್ನಲಾಗಿದೆ.
ರವೀಂದ್ರ ರವರು ಮಂಗಳೂರಿನಲ್ಲಿ ಲಾರಿಯಲ್ಲಿ ನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದು ಅ.29 ರಂದು ರಾತ್ರಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಲಾರಿ ಡಿಕ್ಕಿಯಾಗಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಮೃತರು ತಾಯಿ,ಇಬ್ಬರು ಸಹೋದರರು ಹಾಗೂ ಓರ್ವ ಸಹೋದರಿಯನ್ನು ಅಗಲಿದ್ದಾರೆ