ಬೆಂಗಳೂರು: ಪುನೀತ್ ರಾಜ್ಕುಮಾರ್ ಅವರ ಅಂತ್ಯಕ್ರಿಯೆ ನಾಳೆ ನಡೆಯಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಬೊಮ್ಮಾಯಿ.. ನಾನು ರಾಘಣ್ಣ ಹಾಗೂ ಶಿವರಾಜ್ಕುಮಾರ್ ಜೊತೆ ಮಾತನಾಡಿದೆ. ಪುನೀತ್ ಅವರ ಅಭಿಮಾನಿಗಳು ಲಕ್ಷ ಲಕ್ಷ ಸಂಖ್ಯೆಯಲ್ಲಿ ಹರಿದು ಬರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ಅಂತ್ಯಕ್ರಿಯೆ ನೆರವೇರಿಸಲು ನಿರ್ಧರಿಸಲಾಗಿದೆ ಅಂತ ಮಾಹಿತಿ ನೀಡಿದರು.
ಸರ್ಕಾರ ಹಾಗೂ ಡಾ.ರಾಜ್ ಕುಟುಂಬದ ತೀರ್ಮಾನದಂತೆ ನಾಳೆ ಸಕಲ ಸರ್ಕಾರಿ ಗೌರವಗಳೊಂದಿಗೆ ಪುನೀತ್ ಅವರ ಅಂತ್ಯಕ್ರಿಯೆ ನೆರವೇರಲಿದೆ. ಕಂಠೀರವ ಸ್ಟೇಡಿಯಂನಲ್ಲಿರುವ ಡಾ.ರಾಜ್ ಹಾಗೂ ಪಾರ್ವತಮ್ಮ ರಾಜ್ಕುಮಾರ್ ಸಮಾಧಿ ಪಕ್ಕದಲ್ಲೇ ಅಪ್ಪುವಿನ ಅಂತ್ಯಕ್ರಿಯೆ ನಡೆಯಲಿದೆ.