ಬೆಂಗಳೂರು: ದೀಪಾವಳಿ ದಿನಾಂಕ ಸಮೀಪಿಸುತ್ತಿರುವಂತೆ ಹಬ್ಬದ ಆಚರಣೆ ಸಂಬಂಧ ಕರ್ನಾಟಕ ಸರ್ಕಾರ ಗೈಡ್‌ಲೈನ್ಸ್ ಬಿಡುಗಡೆ ಮಾಡಿದೆ. ದೀಪಾವಳಿ ವೇಳೆ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಲಾಗುವುದು. ಬೇರೆ ಯಾವುದೇ ಪಟಾಕಿ ಮಾರಾಟ ಮಾಡುವಂತಿಲ್ಲ. ನವೆಂಬರ್ 1 ರಿಂದ 10 ರವರೆಗೆ ಪಟಾಕಿ ಮಾರಾಟಕ್ಕೆ ಅವಕಾಶ ಇದೆ. ಪರವಾನಗಿ ಪಡೆದವರು ಮಾತ್ರ ಪಟಾಕಿ ಮಾರಾಟ ಮಾಡಬೇಕು ಎಂದು ರಾಜ್ಯ ಸರ್ಕಾರದಿಂದ ದೀಪಾವಳಿಗೆ ಗೈಡ್‌ಲೈನ್ಸ್ ಬಿಡುಗಡೆ ಮಾಡಲಾಗಿದೆ.
ಹಸಿರು ಪಟಾಕಿ ಮಾತ್ರ ಮಾರಾಟ ಮತ್ತು ಹಚ್ಚಲು ಅವಕಾಶ ನೀಡಲಾಗಿದೆ. ಹಸಿರು ಪಟಾಕಿ ಹೊರತುಪಡಿಸಿ ಉಳಿದ ಪಟಾಕಿ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಅಷ್ಟೇ ಅಲ್ಲದೆ, ನವೆಂಬರ್ ಒಂದರಿಂದ ಹತ್ತನೇ ತಾರೀಕಿನವರೆಗೆ ಮಾತ್ರ ಹಸಿರು ಪಟಾಕಿ ಮಳಿಗೆ ತೆರೆಯಲು ಅವಕಾಶ ನೀಡಲಾಗಿದೆ. ಅಧಿಕೃತ ಪರವಾನಗಿ ಪಡೆದವರಿಗೆ ಮಾತ್ರ ಹಸಿರು ಪಟಾಕಿ ಮಾರಾಟಕ್ಕೆ ಅವಕಾಶ ಎಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ.