ವಿಟ್ಲ: ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಇಂದು ಮಂಗಳೂರಿನಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದ ವಿಟ್ಲದ ಪಡಿಬಾಗಿಲಿನ ಖ್ಯಾತ ಸ್ಯಾಕ್ಸೋಫೋನ್ ಕಲಾವಿದ ಡಾ. ಪಿ.ಕೆ.ದಾಮೋದರ ಹಾಗೂ ಅವರ ಪತ್ನಿಯನ್ನು ಲಯನ್ಸ್ ಕ್ಲಬ್ ವಿಟ್ಲ ಸಿಟಿ ವತಿಯಿಂದ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಕ್ಲಬ್ ನ ಅಧ್ಯಕ್ಷರಾದ ಬಿ.ಸಂದೇಶ್ ಶೆಟ್ಟಿ, ಪ್ರಾಂತೀಯ ಸಲಹೆಗಾರ ಸುದರ್ಶನ್ ಪಡಿ ಯಾರ್ ,ಗೈಡಿಂಗ್ ಲೈನ್ ಸತೀಶ್ ಕುಮಾರ್ ಆಳ್ವ , ಸುರೇಶ್ ಬನಾರಿ, ಖಜಾಂಜಿ ಶ್ವೇತ ರವಿಕುಮಾರ್ , ಉಪಾಧ್ಯಕ್ಷರಾದ ವಸಂತ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.