ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಟ್ರಾವೆಲರ್ ಕಂದಕಕ್ಕೆ ಉರುಳಿ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಡ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಶಿರಾಡಿ ಎಂಬಲ್ಲಿ ನಡೆದಿದೆ.
ನ.2 ರ ನಸುಕಿನ ವೇಳೆ ಈ ಅಪಘಾತ ನಡೆದಿದ್ದು, ನಿದ್ದೆ ಮಂಪರಿನಲ್ಲಿ ಚಾಲಕ ನಿಯಂತ್ರಣ ಕಳಕೊಂಡ ಟೆಂಪೊ ಟ್ರಾವೆಲ್ಲರ್ ಸುಮಾರು 60 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದೆ ಎಂದು ಶಂಕಿಸಲಾಗಿದೆ.
ಅಪಘಾತದಿಂದಾಗಿ ಐವರು ಗಾಯಗೊಂಡಿದ್ದು, ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.




























