ಪುತ್ತೂರು: ಬಡಗನ್ನೂರು ಗ್ರಾಮದ ಮೈಂದನಡ್ಕ ಸಮೀಪ ಅನ್ಯಕೋಮಿನ ವ್ಯಕ್ತಿಯೊಬ್ಬ ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣಕ್ಕೆ ಸಂಬಂಧಿಸಿ ಪೋಕ್ಸೋ ಮತ್ತು ದಲಿತ ದೌರ್ಜನ್ಯ ಪ್ರಕರಣದ ದಾಖಲಾಗಿದ್ದು, ಈ ಆರೋಪಿಗೆ ಪುತ್ತೂರು 5ನೇ ಹೆಚ್ಚುವರಿ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಬಡಗನ್ನೂರು ಮೈಂದನಡ್ಕ ನಿವಾಸಿ ಆದಂ ಕುಂಞಿ (56)ಎಂಬವರು ಆರೋಪಿಯಾಗಿದ್ದು. ಆತನ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಅಡಿಯಲ್ಲಿ ಪೋಕ್ಸೋ ಮತ್ತು ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿತ್ತು.
ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿತ್ತು. ವಿಚಾರಣೆ ನಡೆಸಿದ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಆರೋಪಿ ಪರ ವಕೀಲರಾದ ಅಶ್ರಫ್ ಅಗ್ನಾಡಿ ಮತ್ತು ಮಜೀದ್ ಖಾನ್ ವಾದಿಸಿದರು.