ಬಂಟ್ವಾಳ: ಇಂಟೆಕ್ ರಾಜ್ಯಾಧ್ಯಕ್ಷ ರಾಕೇಶ್ ಮಲ್ಲಿ ತಂದೆ ಬಂಟ್ವಾಳದ ಹಿರಿಯ ಧುರೀಣ ಸದಾನಂದ ಮಲ್ಲಿ ರವರು ನ.3ರ ರಾತ್ರಿ ನಿಧನರಾದರು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಮಾಜಿ ಸದಸ್ಯರು, ಬಂಟ್ವಾಳ ನಗರಸಭೆಯ ಅಧ್ಯಕ್ಷರೂ ಆಗಿದ್ದ ಅವರು ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರಗಳಲ್ಲಿ ತಮ್ಮ ಹೆಜ್ಜೆ ಗುರುತನ್ನು ಮೂಡಿಸಿದ್ದರು.
ಮೃತರ ನಿಧನಕ್ಕೆ ಮಾಜಿ ಸಚಿವ ಬಿ. ರಮಾನಾಥ ರೈ, ಹಿರಿಯ ಕಾಂಗ್ರೆಸ್ ನಾಯಕ ಬಿ. ಜನಾರ್ದನ ಪೂಜಾರಿ, ಶಾಸಕ ರಾಜೇಶ್ ನಾಯ್ಕ್, ಜಿಲ್ಲಾ ಪಂಚಾಯತ್ ಸದಸ್ಯ ತುಂಬೆ ಚಂದ್ರಪ್ರಕಾಶ್ ಶೆಟ್ಟಿ ಸಹಿತ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.