ಪುತ್ತೂರು: ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಡಿಸೆಂಬರ್ ತಿಂಗಳಿನಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ನ.4ರಂದು ಬ್ರಹ್ಮಕಲಶೋತ್ಸವ ಸಮಿತಿಯವರು ಶ್ರೀ ಕ್ಷೇತ್ರದಲ್ಲಿ ಭೇಟಿ ಮಾಡಿ ಆಹ್ವಾನಿಸಿದರು. ಬಳಿಕ ಹರ್ಷೇಂದ್ರ ಕುಮಾರ್ ಹೆಗ್ಗಡೆಯವರನ್ನು ಭೇಟಿ ಮಾಡಿ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದರು.
ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ರೈ, ಪದಾಧಿಕಾರಿಗಳಾದ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ವಾರಿಸೇನ ಜೈನ್ ಕೋಡಿಯಾಡಿ, ಕೇಶವ ಭಂಡಾರಿ ಬೆಳ್ಳಿಪ್ಪಾಡಿ ಕೈಪ, ರಾಜೀವ ಶೆಟ್ಟಿ ಕೇದಗೆ, ಜಯಪ್ರಕಾಶ್ ಬದಿನಾರು, ಯೋಗೀಶ್.ಯಸ್.ಸಾಮಾನಿ ಸಂಪಿಗೆದಡಿ-ಮಠಂತಬೆಟ್ಟು, ಶಿವಪ್ರಸಾದ್ ರೈ ಮಠಂತಬೆಟ್ಟು, ಸದಾಶಿವ ರೈ ಮಠಂತಬೆಟ್ಟು, ಪ್ರೀತಂ ಶೆಟ್ಟಿ ಕೇದಗೆ ಮತ್ತು ಜಯಾನಂದ ಗೌಡ ಪಿಲಿಗುಂಡ ಉಪಸ್ಥಿತರಿದ್ದರು.