ಕಡಬ: ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಜಿಲ್ಲೆಯ ವತಿಯಿಂದ ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಡಬ ಪ್ರಖಂಡದ ನೇತೃತ್ವದಲ್ಲಿ ರಾಜ್ಯದಲ್ಲಿ ಶೀಘ್ರವಾಗಿ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸುವಂತೆ ಆಗ್ರಹಿಸಿ ಬೃಹತ್ ‘ಜನಜಾಗೃತಿ’ ಸಭೆ ನ.6 ಕಡಬದಲ್ಲಿ ನಡೆಯಲಿದೆ.
ಕಡಬ ವೃದ್ಧಿ ಹೋಟೆಲ್ ಮುಂಭಾಗದಿಂದ ಮೆರವಣಿಗೆಯ ಮೂಲಕ ಶ್ರೀ ದುರ್ಗಾಂಬಿಕಾ ದೇವಾಲಯದ ಅವರಣಕ್ಕೆ ಜಾಗೃತಿ ಜಾಥಾ ನಡೆಯಲಿದೆ. ನಂತರ ಕಡಬ ಶ್ರೀ ದುರ್ಗಾಂಬಿಕಾ ದೇವಾಲಯದ ಆವರಣದಲ್ಲಿ ನಡೆಯುವ ಜನಜಾಗೃತಿ ಸಮಾವೇಶದಲ್ಲಿ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಸುಬ್ರಹ್ಮಣ್ಯ ಮಠ, ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಶ್ರೀ ಮುಕ್ತಾನಂದ ಸ್ವಾಮೀಜಿ, ಶ್ರೀ ಕ್ಷೇತ್ರ ಕರಿಂಜೆ ಮಠ ಇವರು ದಿವ್ಯ ಉಪಸ್ಥಿತಿ ಹಾಗೂ ಜಾಗೃತಿ ಸಂದೇಶ ನೀಡಲಿದ್ದಾರೆ.
ವಿಶ್ವ ಹಿಂದೂ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯಾಧ್ಯಕ್ಷರಾದ ಎಂ.ಬಿ ಪುರಾಣಿಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ವಿಶ್ವ ಹಿಂದೂ ಪರಿಷತ್ ಮಂಗಳೂರು ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ಸಮಾವೇಶ ಭಾಷಣ ಮಾಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.