ಪುತ್ತೂರು: ಸರಕಾರದ ಸೂಚನೆಯಂತೆ ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾದ ಗೋವುಗಳ ಮಹತ್ವ ಮತ್ತು ಸಂರಕ್ಷಣೆ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನ.5 ರಂದು ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಮತ್ತು ವಿಶ್ವಹಿಂದೂ ಪರಿಷದ್ ಸಹಯೋಗದಲ್ಲಿ ‘ಗೋ ಪೂಜಾ’ ಕಾರ್ಯಕ್ರಮ ನಡೆಯಿತು.
ಶಾಸಕ ಸಂಜೀವ ಮಠಂದೂರು ಅವರು ಮಾತನಾಡಿ ತಾಯಿ ಸಮಾನವಾದ ಗೋವು ಪ್ರತಿಯೊಬ್ಬರ ಆರಾಧನೆಗೆ ಅಗತ್ಯವಾಗಿದೆ. ವೈಜ್ಞಾನಿಕವಾಗಿಯೂ ಗೋವಿನ ವಿಶೇಷತೆಯನ್ನು ಮತ್ತೊಮ್ಮೆ ಸಮಾಜಕ್ಕೆ ತಿಳಿಸುವ ಸಂಗತಿಯನ್ನು ನಮ್ಮ ಸರಕಾರ ಮಾಡುತ್ತಿದೆ ಎಂದರು. ವ್ಯವಸ್ಥಾಪನಾ ಸಮಿತಿ ಸದಸ್ಯರೂ ಪ್ರಧಾನ ಅರ್ಚಕರೂ ಆಗಿರುವ ವೇ ಮೂ ವಿ.ಎಸ್ ಭಟ್ ವೈದಿಕ ಕಾರ್ಯಕ್ರಮ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ದೇವಳದ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ, ಸದಸ್ಯರಾದ ಡಾ.ಸುಧಾ ಎಸ್ ರಾವ್, ವೀಣಾ ಬಿ.ಕೆ, ಐತ್ತಪ್ಪ ನಾಯ್ಕ್, ರಾಮ್ ದಾಸ್ ಗೌಡ, ಶೇಖರ್ ನಾರಾವಿ, ದೇವಳದ ಕಾರ್ಯ ನಿರ್ವಹಣಾಧಿಕಾರಿ ನವೀನ್ ಭಂಡಾರಿ, ಬಜರಂಗದಳ ದಕ್ಷಿಣ ಪ್ರಾಂತ ಸಂಯೋಜಕ ಮುರಳಿಕೃಷ್ಣ ಹಸಂತಡ್ಕ, ವಿಶ್ವಹಿಂದು ಪರಿಷದ್ ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ, ಪ್ರೇಮಲತಾ ರಾವ್, ಪ್ರಭಾವತಿ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷೆ ಗೌರಿ ಬನ್ನೂರು, ಸದಸ್ಯ ಪಿ.ಜಿ.ಜಗನ್ನಿವಾಸ ರಾವ್, ಜಯಶ್ರೀ ಎಸ್ ಶೆಟ್ಟಿ, ವಿಶ್ವಹಿಂದೂ ಪರಿಷದ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸತೀಶ್ ಬಿ.ಎಸ್, ಬಜರಂಗದಳ ಗೋ ರಕ್ಷಾ ಪ್ರಮುಖ್ ಕಿರಣ್ ರಾಮಕುಂಜ, ರಾಮಚಂದ್ರ ಕಾಮತ್, ಮಾದವ ಪೂಜಾರಿ, ಪ್ರವೀಣ್ ಕಲ್ಲೆಗ, ಜಯಂತ್ , ಶ್ರೀಧರ್ ತೆಂಕಿಲ, ಜಿತೇಶ್ , ರೂಪೇಶ್, ಜೀವನ್ ಬಲ್ನಾಡು, ಸೇಸಪ್ಪ ಬೆಳ್ಳಿಪ್ಪಾಡಿ, ವಿಶಾಖ್ ರೈ ಮತ್ತಿತರರು ಉಪಸ್ಥಿತರಿದ್ದರು. ರಾಜೇಶ್ ಬನ್ನೂರು ಕಾರ್ಯಕ್ರಮ ನಿರೂಪಿಸಿದರು.


































