ಸುಳ್ಯ: ಕಾರಿಂಜೇಶ್ವರ ದೇವಸ್ಥಾನಕ್ಕೆ ಚಪ್ಪಲಿ ಧರಿಸಿ ಪ್ರವೇಶಿಸಿದ ಪ್ರಕರಣಕ್ಕೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ನಡೆಯುತ್ತಿರುವ ಸಂದರ್ಭ ಪ್ರವಾದಿ ಮಹಮ್ಮದ್ ಪೈಗಂಬರ್ ವಿರುದ್ಧ ಅವಾಚ್ಯ ಶಬ್ದಗಳಿಂದ ಕಮೆಂಟ್ ಹಾಕಿದ್ದಾರೆ ಎಂದು ಬೆಳ್ಳಾರೆ ಠಾಣೆಗೆ ದೂರು ದಾಖಲಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಕಾರಿಂಜೇಶ್ವರ ದೇವಸ್ಥಾನಕ್ಕೆ ಚಪ್ಪಲಿ ಧರಿಸಿ ಪ್ರವೇಶಿಸಿದ ವಿಚಾರಕ್ಕೆ ಸಂಬಂಧಪಟ್ಟಂತೆ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಚರ್ಚೆಯಾಗಿತ್ತು.
ಈ ಸಂದರ್ಭ ಸುಳ್ಯ ತಾಲೂಕಿನ ಐವರ್ನಾಡು ನಿವಾಸಿ ಜಗದೀಶ ಕೈವಲ್ತಡ್ಕ ಎಂಬಾತ ಪ್ರವಾದಿ ಮುಹಮ್ಮದ್ ಕುರಿತು ಕಮೆಂಟ್ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಅಶಾಂತಿಯನ್ನು ಹಬ್ಬಿಸಲು ಯತ್ನಿಸುತ್ತಿದ್ದಾರೆ ಇವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಂಡು ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ನೌಫಲ್ ಎಂಬವರು ಬೆಳ್ಳಾರೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.